ಕನ್ನಡ ಚಲನಚಿತ್ರ ಕ್ಷೇತ್ರದ ಪ್ರಮುಖ ನಟರಾದ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಹಾಕಿದ್ದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಮತ್ತಿಬ್ಬರನ್ನು ಬಂಧಿಸಿದ್ದಾರೆ ಎಂದು ಕೇಳಿ ಬಂದಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಇದೀಗ ನಾಲ್ಕಕ್ಕೆ ಏರಿಕೆಯಾಗಿದೆ.
ಹೊಸದಾಗಿ ಬಂಧಿತರಾದವರ ಪಟ್ಟಿ
ನಾಗರಾಜ್ ತಳವಾರ್ ಎಂಬ ಇವರು ಹುಬ್ಬಳ್ಳಿಯಲ್ಲಿ ಪೆಟ್ರೋಲ್ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದು ಇವರನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ಪ್ರಶಾಂತ್ ತಳವಾರ್ ಎಂಬುವವರನ್ನು ಬಂಧಿಸಿದ್ದು, ಇವರು ಧಾರವಾಡದಲ್ಲಿ ಆಡಿಟರ್ ಆಗಿ ಕೆಲಸ ಮಾಡುತ್ತಿದ್ದರೆಂದು ತಿಳಿದುಬಂದಿದೆ. ಪ್ರಶಾಂತ್ ತಳವಾರ್ ಕೂಡಾ ಸಿಸಿಬಿ ವಶಕ್ಕೆ ಸಿಕ್ಕಿದ್ದಾರೆ. ಇವರಿಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಹೊಸ ತಿರುವು ಕಂಡುಬಂದಿದೆ.
ಮೊದಲಿನ ಬಂಧನಗಳು
ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರನ್ನು ಬಂಧಿಸಲಾಗಿತ್ತು ಚಿಕ್ಕಬಾಣವಾರದ ಆಟೋ ಡ್ರೈವರ್ ಚಂದ್ರು, ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ ಅವರನ್ನ ಬಂಧಿಸಿದ್ದರು. ಇವರಿಬ್ಬರನ್ನು ಕೆಲವು ದಿನಗಳ ಹಿಂದೆ ಬಂಧಿಸಲಾಗಿತ್ತು.
ಪ್ರಕರಣದ ಹಿನ್ನೆಲೆ
ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಕಂಡು ಬಂದ ಅಶ್ಲೀಲ ಹಾಗೂ ಅವಮಾನಕಾರಿ ಕಾಮೆಂಟ್‌ಗಳು ಹರಿದಾಡುತ್ತಿದ್ದವು. ಈ ಬಗ್ಗೆ ದೂರು ದಾಖಲಾದ ನಂತರ ಸಿಸಿಬಿ ಪೊಲೀಸರು ತನಿಖೆ ಆರಂಭಿಸಿದರು. ತನಿಖೆಯ ವೇಳೆ ಕಾಮೆಂಟ್‌ಗಳನ್ನು ಹಾಕಿದವರನ್ನು ಪತ್ತೆಹಚ್ಚಿ ಕ್ರಮವಾಗಿ ಇದರ ಬೆನ್ನಲ್ಲೇ ಬಂಧಿಸುತ್ತಿದ್ದಾರೆ.
ತನಿಖೆಯ ಪ್ರಗತಿ ನೋಡುವುದಾದರೆ
ಸಿಸಿಬಿ ಪೊಲೀಸರು ತಾಂತ್ರಿಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ಗುರುತು ಪತ್ತೆಹಚ್ಚಿದ್ದಾರೆ. ಬಂಧಿತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡು ಹೆಚ್ಚಿನ ಮಾಹಿತಿ ಪಡೆಯುತ್ತಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲವರು ಭಾಗಿಯಾಗಿರುವ ಸಾಧ್ಯತೆ ಇರುವುದರಿಂದ ತನಿಖೆ ಮುಂದುವರಿಯುತ್ತಿದೆ. ಈ ಘಟನೆ ಕನ್ನಡ ಸಿನಿರಂಗದಲ್ಲಿ ಹಾಗೂ ಅಭಿಮಾನಿಗಳ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಿನಿ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತಿದ್ದಾರೆ. ಮಹಿಳೆಯರ ವಿರುದ್ಧ ಆನ್‌ಲೈನ್ ಮಾನಹಾನಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಕರಣವು ಮತ್ತೊಮ್ಮೆ ಬಾರಿ ಚರ್ಚೆಗೆ ಕಾರಣವಾಗಿದೆ.
ಹೌದು ಇದರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು ಬಂಧಿತರ ವಿರುದ್ಧ ಐಟಿ ಕಾಯ್ದೆಯಡಿ ಹಾಗೂ ಮಹಿಳೆಯರ ಮಾನಹಾನಿಗೆ ಸಂಬಂಧಿಸಿದ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳಿಗೆ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದು. ತನಿಖೆಯ ಪ್ರಗತಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣದಲ್ಲಿ ಈಗಾಗಲೇ ನಾಲ್ಕು ಮಂದಿ ಬಂಧಿತರಾಗಿದ್ದಾರೆ. ಹುಬ್ಬಳ್ಳಿ, ಧಾರವಾಡ, ಚಿಕ್ಕಬಾಣವಾರ ಹಾಗೂ ದಾವಣಗೆರೆಯಿಂದ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ. ಸಿಸಿಬಿ ತನಿಖೆ ಇನ್ನೂ ಮುಂದುವರಿಯುತ್ತಿದ್ದು, ಹೆಚ್ಚಿನ ಹೆಸರುಗಳು ಹೊರಬರುವ ಸಾಧ್ಯತೆ ಇದೆ. ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ವಿರುದ್ಧ ಅಶ್ಲೀಲ ಕಾಮೆಂಟ್ ಪ್ರಕರಣವು ಸಾಮಾಜಿಕ ಜಾಲತಾಣದ ದುರುಪಯೋಗದ ಗಂಭೀರತೆಯನ್ನು ತೋರಿಸುತ್ತದೆ. ಸಿಸಿಬಿ ಪೊಲೀಸರು ತ್ವರಿತವಾಗಿ ಕ್ರಮ ಕೈಗೊಂಡು ನಾಲ್ಕು ಮಂದಿಯನ್ನು ಬಂಧಿಸಿರುವುದು ಕಾನೂನು ವ್ಯವಸ್ಥೆಯ ಗಂಭೀರತೆಯನ್ನು ಪ್ರತಿಬಿಂಬಿಸುತ್ತದೆ. ಈ ಪ್ರಕರಣವು ಮಹಿಳೆಯರ ವಿರುದ್ಧ ಆನ್‌ಲೈನ್ ಮಾನಹಾನಿಳನ್ನು ತಡೆಯುವಲ್ಲಿ ಮಾದರಿಯಾಗುವ ನಿರೀಕ್ಷೆಯಿದೆ. ಮುನಿದ್ನ ದಿನಗಳಲ್ಲಿ ಏನಾಗುತ್ತದೆಯೋ ಕಾದು ನೋಡೋಣ.