'ಇಂದಿನ ಕನ್ನಡ ಸಿನಿಮಾಗಳು ತಮ್ಮ ಸಾಹಿತ್ಯ ಮತ್ತು ಸಂಸ್ಕೃತಿಯ ಬೇರುಗಳಿಂದ ದೂರವಾಗಿರುವುದೇ, ಜನರು ಚಿತ್ರಮಂದಿರಗಳಿಂದ ದೂರ ಉಳಿಯಲು ಕಾರಣ' ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಅಭಿಪ್ರಾಯಪಟ್ಟಿದ್ದಾರೆ. ಅವರು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನಡೆದ “ಕನ್ನಡ ಸಿನಿ ಪಯಣದ 50 ವರ್ಷಗಳ ಸುವರ್ಣ ಸಂಭ್ರಮ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿಂದೆ ಕನ್ನಡ ಸಿನಿಮಾಗಳು ಮತ್ತು ಅದರ ಪಾತ್ರಗಳು ನಮ್ಮ ಬದುಕಿನ ಭಾಗವಾಗಿದ್ದವು. ಹೀಗಾಗಿ ಜನರು ಸ್ವಯಂಪ್ರೇರಿತವಾಗಿ ಚಿತ್ರಮಂದಿರಗಳತ್ತ ಹೋಗುತ್ತಿದ್ದರು. ಆಗಿನ ನಟರು ಇಂದಿನಂತೆ ತಮ್ಮ ಸಿನಿಮಾವನ್ನು ಪ್ರಚಾರ ಮಾಡಲು ಬೇಡಿಕೊಳ್ಳುವ ಅಗತ್ಯ ಇರಲಿಲ್ಲ ಎಂದರು. “ಹಿಂದಿನ ಹೆಜ್ಜೆಯನ್ನು ಅರಿಯದೆ ಮುಂದಿನ ಹೆಜ್ಜೆ ಇಡಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕನ್ನಡ ಸಿನಿಮಾ ಪರಂಪರೆಯನ್ನು ಗಟ್ಟಿಗೊಳಿಸಿದ ಪಾರ್ವತಮ್ಮ ರಾಜ್ ಕುಮಾರ್, ಎಸ್. ರಾಮಚಂದ್ರ, ಗಿರೀಶ್ ಕಾಸರವಳ್ಳಿ, ಎಸ್.ವಿ. ರಾಜೇಂದ್ರಸಿಂಗ್ ಬಾಬು ಮತ್ತು ಡಾ. ಜಯಮಾಲ ಅವರ ಸಾಧನೆಗಳನ್ನು ಸ್ಮರಿಸಿದ್ದು. ಇವರ ಕೊಡುಗೆಗಳು ಕನ್ನಡ ಸಿನಿಮಾಗೆ ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ತಂದು ಕೊಟ್ಟಿವೆ ಎಂದು ಪ್ರಶಂಸಿಸಿದರು.
ಹೌದು, ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ “ಕನ್ನಡ ಸಿನಿ ಪಯಣದ 50 ವರ್ಷಗಳ ಸುವರ್ಣ ಸಂಭ್ರಮ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರು ಮಾತನಾಡಿದ ಪರಿಗೆ ಎಲ್ಲರೂ ಮೆಚ್ಚುಗೆ ಸೂಚಿಸಿದ್ದಾರೆ. ಇಂದಿನ ಕನ್ನಡ ಸಿನಿಮಾಗಳು ಸಾಹಿತ್ಯ ಮತ್ತು ಸಂಸ್ಕೃತಿಯ ಬೇರುಗಳಿಂದ ದೂರವಾಗಿರುವುದರಿಂದ ಜನರು ಚಿತ್ರಮಂದಿರಗಳಿಂದ ದೂರವಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.
ಹಿಂದಿನ ಕಾಲದಲ್ಲಿ ಸಿನಿಮಾಗಳು ಜನರ ಬದುಕಿನ ಭಾಗವಾಗಿದ್ದವು, ಜನರು ಸ್ವಯಂಪ್ರೇರಿತವಾಗಿ ಚಿತ್ರಮಂದಿರಗಳಿಗೆ ಹೋಗುತ್ತಿದ್ದರು. ನಟರು ತಮ್ಮ ಸಿನಿಮಾವನ್ನು ಪ್ರಚಾರ ಮಾಡಲು ಬೇಡಿಕೊಳ್ಳುವ ಅಗತ್ಯ ಇರಲಿಲ್ಲ ಎಂದರು. “ಹಿಂದಿನ ಹೆಜ್ಜೆಯನ್ನು ಅರಿಯದೆ ಮುಂದಿನ ಹೆಜ್ಜೆ ಇಡಲು ಸಾಧ್ಯವಿಲ್ಲ” ಎಂದು ಅವರು ಒತ್ತಿ ಹೇಳಿದರು. ಕನ್ನಡ ಸಿನಿಮಾ ಪರಂಪರೆಯನ್ನು ಗಟ್ಟಿಗೊಳಿಸಿದ ಪಾರ್ವತಮ್ಮ ರಾಜ್ ಕುಮಾರ್, ಎಸ್. ರಾಮಚಂದ್ರ, ಗಿರೀಶ್ ಕಾಸರವಳ್ಳಿ, ಎಸ್.ವಿ. ರಾಜೇಂದ್ರಸಿಂಗ್ ಬಾಬು ಮತ್ತು ಡಾ. ಜಯಮಾಲ ಅವರ ಕೊಡುಗೆಗಳನ್ನು ಸ್ಮರಿಸಿದರು.
ಇವರ ಸಾಧನೆಗಳಿಂದ ಕನ್ನಡ ಸಿನಿಮಾಗೆ ರಾಷ್ಟ್ರಮಟ್ಟ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ದೊರೆತಿದೆ ಎಂದು ಪ್ರಶಂಸಿಸಿದರು. ಕನ್ನಡ ಸಿನಿಮಾಗಳು ತಮ್ಮ ಮೂಲ ಬೇರುಗಳನ್ನು ಅರಿತು ಮುಂದುವರಿಯಬೇಕು ಎಂಬ ಸಂದೇಶವನ್ನು ಅವರು ನೀಡಿದರು.