ಕರ್ನಾಟಕದಲ್ಲಿ ವೇದ್ಯಕೀಯ ಶಿಕ್ಷಣದ ಅವಕಾಶಗಳನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಹೊಸ ಸರ್ಕಾರಿ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಯೋಜನೆ ರೂಪಿಸಿದೆ. ಹಳ್ಳಿಯಲ್ಲಿ ವಾಸಿಸುತ್ತಿರುವ ಕುಟುಂಬಗಲ್ಲಿಂದ ಬರುವ ಮಕ್ಕಳಿಗೆ ಈ ಯೋಜನೆಯಿಂದ ಶಿಕ್ಷಣಕೆ ಸಹಾಯವಾಗುತ್ತದೆ, ಹಾಗು ಕೇವಲ್ಲವಿದ್ಯಾಭ್ಯಾಸಕ್ಕಾಗಿ ಹಳ್ಳಿಯಿಂದ ಸಿಟಿಗಳ್ಲಲಿರುವ ವಿದ್ಯಾರ್ಥಿಗಳಿಗೂ ಸಹ ಸಹಕಾರವಾಗಬಹುದಾಗಿದು. ಮುಂದಿನ ಶೈಕ್ಷಣಿಕ ವರ್ಷವಾದ 2027–28ನೇ ಕೇ ಕೆಲವು ಕಾಲೇಜುಗಳು ಸಿದ್ಧವಾಗುವ ಗುರಿ ಹೊಂದಿದು. ರಾಮನಗರ, ಪುತ್ತೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಿದ್ಧತೆ ನಡೆಯುತ್ತಿದ್ದು, ಕೆಲವು ಕಡೆ ನಿರ್ಮಾಣ ಕಾರ್ಯ, ಟೆಂಡರ್ ಪ್ರಕ್ರಿಯೆ ಹಾಗೂ ಅನುಮತಿ ಪಡೆಯುವ ಹಂತಗಳು ಮುಂದುವರಿದಿವೆ.
ಹೊಸ ಮೆಡಿಕಲ್ ಕಾಲೇಜುಗಳು ಆರಂಭವಾದರೆ ವೈದ್ಯಕೀಯ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಅವಕಾಶ ಹೆಚ್ಚುವುದರ ಜೊತೆಗೆ, ಆಯಾ ಜಿಲ್ಲೆಗಳ ಸರ್ಕಾರಿ ಆಸ್ಪತ್ರೆಗಳ ಆರೋಗ್ಯ ಸೇವೆಯೂ ಸುಧಾರಿಸುವ ನಿರೀಕ್ಷೆಯಿದೆ.ಪ್ರತಿ ಕಾಲೇಜಿನಲ್ಲಿ ಆರಂಭಿಕ ಹಂತದಲ್ಲಿ ಸುಮಾರು 50 MBBS ಸೀಟುಗಳನ್ನು ಒದಗಿಸುವ ನಿರೀಕ್ಷೆಯಿದೆ.
ಸರ್ಕಾರ ಆರಂಭದಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ ಎಂಬ ಸುದ್ದಿ ಹರಿದಾಡುತ್ತಿದ್ದರೂ, ಸರ್ಕಾರದ ಇತ್ತೀಚಿನ ಮಾಹಿತಿಯ ಪ್ರಕಾರ ಎಲ್ಲಾ ನಾಲ್ಕು ಕಾಲೇಜುಗಳು ಒಂದೇ ಸಮಯದಲ್ಲಿ ಆರಂಭವಾಗುವುದು ಖಚಿತವಾಗಿಲ್ಲ. ಕೆಲವು ಕಾಲೇಜುಗಳು 2027–28ನೇ ಶೈಕ್ಷಣಿಕ ವರ್ಷಕ್ಕೆ ಸಿದ್ಧವಾಗುವ ಗುರಿ ಹೊಂದಿವೆ.
ಯಾವ ಜಿಲ್ಲೆಗಳಲ್ಲಿ ಹೊಸ ಮೆಡಿಕಲ್ ಕಾಲೇಜುಗಳು?
1. ರಾಮನಗರ
ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ (RGUHS) ಹೊಸ ಕ್ಯಾಂಪಸ್‌ನಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕಾಮಗಾರಿ ನಡೆಯುತ್ತಿದೆ. ಕಾಲೇಜು ಆರಂಭಿಸಲು ಅಗತ್ಯವಾದ ಮೂಲಸೌಕರ್ಯ ಸಿದ್ಧಪಡಿಸಲಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆರಂಭಿಸುವ ಗುರಿ ಹೊಂದಲಾಗಿದೆ. ಮೊದಲ ವರ್ಷ ಸುಮಾರು 50 MBBS ಸೀಟುಗಳು ಲಭ್ಯವಾಗುವ ನಿರೀಕ್ಷೆಯಿದೆ.
2. ಪುತ್ತೂರು – ದಕ್ಷಿಣ ಕನ್ನಡ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಕಟ್ಟಡ ಮತ್ತು ಅಗತ್ಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿದ ಬಳಿಕ ಕಾಲೇಜು ಆರಂಭಿಸಲು ಸರ್ಕಾರ ಮುಂದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ಆರಂಭಿಸುವ ಪ್ರಯತ್ನ ನಡೆಯುತ್ತಿದ್ದು, ಆರಂಭದಲ್ಲಿ ಸುಮಾರು 50 MBBS ಸೀಟುಗಳನ್ನು ನೀಡುವ ಉದ್ದೇಶವಿದೆ.
3. ಕೋಲಾರ
ಕೋಲಾರದಲ್ಲಿಯೂ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸಿದೆ. ಕಾಲೇಜು ನಿರ್ಮಾಣಕ್ಕೆ ಜಮೀನು ಗುರುತಿಸಲಾಗಿದ್ದು, ಸಂಬಂಧಿತ ಅನುಮತಿ ಮತ್ತು ಆಡಳಿತಾತ್ಮಕ ಪ್ರಕ್ರಿಯೆಗಳು ನಡೆಯಬೇಕಿವೆ. ಈ ಕಾಲೇಜು ಆರಂಭಿಸುವ ಯೋಜನೆ ಮುಂದಿನ ಹಂತದಲ್ಲಿದ್ದು, 2028–29ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದ ಯೋಜನೆಗಳಲ್ಲಿ ಪರಿಗಣಿಸಲಾಗಿದೆ.
4. ವಿಜಯಪುರ
ವಿಜಯಪುರ ಜಿಲ್ಲೆಯಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ. ಈ ಹಿಂದೆ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಕಾಲೇಜು ಸ್ಥಾಪಿಸುವ ಪ್ರಸ್ತಾವನೆ ಇದ್ದರೂ, ಆ ಯೋಜನೆಯನ್ನು ಸದ್ಯಕ್ಕೆ ತಡೆಹಿಡಿಯಲಾಗಿದೆ. ಹೊಸ ಕಾಲೇಜು ಸ್ಥಾಪನೆಗೆ ಸಂಬಂಧಿಸಿದ ಮುಂದಿನ ನಿರ್ಧಾರ ಹಾಗೂ ಅನುಮೋದನೆಗಳ ಬಳಿಕ ಯೋಜನೆ ಮುಂದುವರಿಯುವ ಸಾಧ್ಯತೆಯಿದೆ.
ಹೊಸ ಕಾಲೇಜುಗಳಿಂದ ವಿದ್ಯಾರ್ಥಿಗಳಿಗೆ ಏನು ಪ್ರಯೋಜನ?
- ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುವ ಅವಕಾಶ ಹೆಚ್ಚಾಗಬಹುದು.
- ಹೊಸ MBBS ಸೀಟುಗಳು ಸೇರ್ಪಡೆಯಾದರೆ ವಿದ್ಯಾರ್ಥಿಗಳಿಗೆ ಪ್ರವೇಶ ಸ್ಪರ್ಧೆಯಲ್ಲಿ ಸ್ವಲ್ಪ ಹೆಚ್ಚಿನ ಅವಕಾಶ ಸಿಗಬಹುದು. ದೂರದ ಜಿಲ್ಲೆಗಳ
- ವಿದ್ಯಾರ್ಥಿಗಳಿಗೆ ತಮ್ಮ ಊರಿನ ಹತ್ತಿರವೇ ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬಹುದು.
- ಜಿಲ್ಲಾಸ್ಪತ್ರೆಗಳಿಗೆ ವೈದ್ಯರು, ತಜ್ಞರು ಹಾಗೂ ವೈದ್ಯಕೀಯ ಸಿಬ್ಬಂದಿಯ ಲಭ್ಯತೆ ಹೆಚ್ಚಿಸುವ ಉದ್ದೇಶಕ್ಕೂ ಈ ಯೋಜನೆ ನೆರವಾಗಬಹುದು.
- ಗ್ರಾಮೀಣ ಭಾಗದ ಜನರಿಗೆ ಉತ್ತಮ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲು ಸಹಕಾರಿಯಾಗಬಹುದು.
ರಾಜ್ಯದಲ್ಲಿ ಈಗಾಗಲೇ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ಸಂಖ್ಯೆ ಹೆಚ್ಚಿದ್ದರೂ, ಹೊಸ ಜಿಲ್ಲೆಗಳಲ್ಲಿ ಕಾಲೇಜು ಸ್ಥಾಪಿಸುವುದರಿಂದ ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಯನ್ನು ವಿಸ್ತರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.
2027–28ರಲ್ಲಿ ಯಾವ ಕಾಲೇಜು ಆರಂಭವಾಗುವ ನಿರೀಕ್ಷೆ?
ಇತ್ತೀಚಿನ ವರದಿಯ ಪ್ರಕಾರ, ರಾಮನಗರ ಮತ್ತು ಪುತ್ತೂರಿನಲ್ಲಿ ಮುಂದಿನ ಶೈಕ್ಷಣಿಕ ವರ್ಷಕ್ಕೆ ಕನಿಷ್ಠ ಎರಡು ಹೊಸ ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಪ್ರತಿ ಕಾಲೇಜಿನಲ್ಲಿ ಆರಂಭಿಕ ಹಂತದಲ್ಲಿ ಸುಮಾರು 50 MBBS ಸೀಟುಗಳನ್ನು ಒದಗಿಸುವ ನಿರೀಕ್ಷೆಯಿದೆ. ಕೋಲಾರ ಮತ್ತು ವಿಜಯಪುರದ ಯೋಜನೆಗಳು ಮುಂದಿನ ಹಂತದಲ್ಲಿದ್ದು, ಅವುಗಳ ಆರಂಭಕ್ಕೆ ಇನ್ನೂ ಪ್ರಕ್ರಿಯೆಗಳು ಪೂರ್ಣಗೊಳ್ಳಬೇಕಿದೆ.
ಹೀಗಾಗಿ ನಾಲ್ಕು ಜಿಲ್ಲೆಗಳಲ್ಲಿ ಕಾಲೇಜುಗಳ ಯೋಜನೆ ಇದ್ದರೂ, ನಾಲ್ಕೂ ಕಾಲೇಜುಗಳು ತಕ್ಷಣ ಆರಂಭವಾಗುತ್ತವೆ ಎನ್ನುವುದು ಸದ್ಯಕ್ಕೆ ಖಚಿತವಲ್ಲ
Comments