ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಬಿಯರ್ ಬಾಟಲ್ ಒಂದನ್ನು ಕೈಯಲ್ಲಿ ಹಿಡಿದುಕೊಂಡು ಗೋವಾದಲ್ಲಿ ಸುತ್ತಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹೌದು ಸಾರ್ವಜನಿಕ ಸ್ಥಳದಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ರಸ್ತೆಯ ಪಕ್ಕದಲ್ಲಿ ಓಡಾಡಿದ್ದಾರೆಂದು ಕಂಡು ಬಂದಿದೆ. ಸಾರಾ ಬಾಟಲ್ ಹಿಡಿದು ಓಡಾಡುತ್ತಿರುವುದನ್ನ ವ್ಯಕ್ತಿಯೊಬ್ಬರು ಅವರ ಮೊಬೈಲ್ ಕ್ಯಾಮೆರಾ ಮೂಲಕ ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಬಳಿಕ ಈ ವಿಡಿಯೋ ವೈರಲ್ ಆಗ್ತಿದ್ದಂತೆಯೇ, ಸಚಿನ್ ತೆಂಡೂಲ್ಕರ್ ಅವರ ಪುತ್ರಿಯ ನಡೆ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
ಹೌದು ಸಾರ್ವಜನಿಕ ಸ್ಥಳದಲ್ಲಿ ಸಾರಾ ಈ ರೀತಿ ಓಡಾಡಿರುವುದಕ್ಕೆ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೋವಾ ದಾರಿಯಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ತಮ್ಮ ಸ್ನೇಹಿತೆಯರ ಜೊತೆ ಸಾರಾ ನಡೆದುಕೊಂಡು ಹೋಗಿದ್ದಾರೆ. ಈ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದರು. ಇದರಲ್ಲಿ ವೆಸ್ಟರ್ನ್ ಔಟ್ ಫಿಟ್ ನಲ್ಲಿ ಸಾರಾ ಸಕತ್ ಗ್ಲಾಮರಸ್ ಆಗಿ ಕಂಡಿದ್ದಾರೆ. ಕ್ರಿಕೆಟಿಗ ಸಚಿನ್ ಪುತ್ರಿಯಾಗಿ ಸಾರಾ ಈ ರೀತಿ ಬಿಯರ್ ಬಾಟಲ್ ಹಿಡಿದುಕೊಂಡು ಊರುರು ಸುತ್ತುವುದು ಅವರ ತಂದೆಯ ಗೌರವಕ್ಕೆ ಧಕ್ಕೆ ತರಲಿದೆ ಎಂದು ಹಲವರು ಪ್ರತಿಕ್ರಿಯೆ ನೀಡಿದರೆ, ಪಾರ್ಟಿ ಮಸ್ತಿ ಏನೆ ಇದ್ದರೂ ಅದಕ್ಕೊಂದು ಚೌಕಟ್ಟು ಅಗತ್ಯವಿದೆ ಎಂದರು.
ಎಲ್ಲರಿಗೂ ಮಾದರಿಯಾಗಿ ಇರಬೇಕಾದವರು ಈ ರೀತಿಯ ವರ್ತನೆ ತೋರುವುದು ಸರಿಯಲ್ಲ ಎಂಬ ಮಾತು ಕೇಳಿಬಂದಿದೆ. ಸಾರಾ ತೆಂಡೂಲ್ಕರ್ ಅವರ ಗೋವಾದಲ್ಲಿ ಬಿಯರ್ ಬಾಟಲ್ ಹಿಡಿದುಕೊಂಡು ಸಾರ್ವಜನಿಕ ಸ್ಥಳದಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆವಿ ವೈರಲ್ ಆಗಿ ಜನರ ಗಮನ ಸೆಳೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಜನರು ವಿಭಿನ್ನ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದು, ಕೆಲವರು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದನ್ನು ವೈಯಕ್ತಿಕ ಸ್ವಾತಂತ್ರ್ಯದ ಭಾಗವೆಂದು ನೋಡಿದ್ದಾರೆ. ಹೌದು ಒಟ್ಟಿನಲ್ಲಿ ಹೇಳಬೇಕು ಅಂದರೆ, ಈ ವಿಡಿಯೋ ಸಾರಾ ಅವರ ನಡೆಗೆ ಸಂಬಂಧಿಸಿದಂತೆ ಸಾಮಾಜಿಕ ಚರ್ಚೆ ಮತ್ತು ವಿವಾದಕ್ಕೆ ಕಾರಣವಾಗಿದೆ, ಇದು ಸಾರ್ವಜನಿಕ ವ್ಯಕ್ತಿಗಳ ನಡೆ-ನುಡಿಗಳು ಜನರ ಗಮನಕ್ಕೆ ಎಷ್ಟು ಬೇಗ ಬರುತ್ತವೆ ಎಂಬುದನ್ನು ಮತ್ತೊಮ್ಮೆ ತೋರಿಸಿದೆ.