ಹೌದು ಇದೀಗ ನಮ್ಮ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಿಗೆ ಇಂದು ಮುಖಾಮುಖಿಯಾಗಿದ್ದಾರೆ. ಡಿಕೆಶಿ ಅವರು ಸಿದ್ದರಾಮಯ್ಯನವರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿಎಂ ಆತ್ಮೀಯವಾಗಿ ಸ್ವಾಗತಿಸಿದರು. ಡಿಕೆಶಿ ಆಗಮಿಸಿದ ತಕ್ಷಣ ಸಿಎಂ ಸಿದ್ದರಾಮಯ್ಯ ಅವರು ವಿಶೇಷ ಕೊಠಡಿಯಲ್ಲಿ ಬ್ರೇಕ್‌ಫಾಸ್ಟ್ ವ್ಯವಸ್ಥೆ ಮಾಡಿದ್ದು, ಇಬ್ಬರೂ ಒಟ್ಟಿಗೆ ಕುಳಿತು ಚರ್ಚೆ ಆರಂಭಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಒನ್ ಟು ಒನ್ ಮೀಟಿಂಗ್ ನಡೆಯುತ್ತಿದ್ದು, ಬೇರೆಯವರಿಗೆ ಪ್ರವೇಶ ಸಂಪೂರ್ಣ ನಿರ್ಬಂಧಿಸಲಾಗಿದೆಯಂತೆ. ರಾಜಕೀಯ ಮೆನುವಿನಲ್ಲಿ ಹಲವು ವಿಷಯಗಳು ಚರ್ಚೆಗೆ ಬಂದಿದ್ದು, ಅಂತಿಮ ತೀರ್ಮಾನಕ್ಕಾಗಿ ಎಲ್ಲರ ಕಣ್ಣು ಈ ಸಭೆಯತ್ತ ನೆಟ್ಟಿದೆ ಎನ್ನಬಹುದು.
ಮೀಟಿಂಗ್ ಹಿನ್ನೆಲೆಯಲ್ಲಿ ಕಾವೇರಿ ನಿವಾಸದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಹೆಚ್ಚುವರಿಯಾಗಿ ಮೂರು ಕೆಎಸ್‌ಆರ್‌ಪಿ ತುಕಡಿ ಹಾಗೂ ಎರಡು ಬಸ್‌ಗಳನ್ನು ನಿಯೋಜಿಸಲಾಗಿದೆ. ಸಿಎಂ-ಡಿಸಿಎಂ ಭೇಟಿಯ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪಕ್ಷದ ಉನ್ನತ ಮೂಲಗಳ ಪ್ರಕಾರ, ಈ ಸಭೆ ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಮೇರೆಗೆ ಆಯೋಜನೆಗೊಂಡಿದೆ. ಹೈಕಮಾಂಡ್ ಇಬ್ಬರು ನಾಯಕರಿಗೂ ಪರಸ್ಪರ ಭೇಟಿಯಾಗಿ ಚರ್ಚಿಸಿ ತೀರ್ಮಾನಕ್ಕೆ ಬರುವಂತೆ ಸೂಚನೆ ನೀಡಿದೆ. "ಕಿತ್ತಾಡಿಕೊಂಡು ಬಂದ್ರೆ ನಾವು ಸಂಧಾನ ಮಾಡಲ್ಲ, ಇಬ್ಬರೂ ಒಟ್ಟಿಗೆ ದೆಹಲಿಗೆ ಬನ್ನಿ" ಎಂದು ರಾಹುಲ್ ಗಾಂಧಿ ಕಟ್ಟಾಜ್ಞೆ ಹೊರಡಿಸಿರುವುದಾಗಿ ಕೇಳಿ ಬಂದಿದೆ.
ಒಟ್ಟಿನಲ್ಲಿ ಹೇಳಬೇಕು ಅಂದರೆ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಆಲ್ಮೋಸ್ಟ್ ತೆರೆ ಬೀಳುವ ಸಾಧ್ಯತೆ ಹೆಚ್ಚಾಗಿದೆ ಎಂದು ಕೇಳಿ ಬರುತ್ತಿದೆ. ಸಿದ್ದರಾಮಯ್ಯ ಡಿಕೆಶಿ ಬ್ರೇಕ್‌ಫಾಸ್ಟ್ ಮೀಟಿಂಗ್ ಫಲಿತಾಂಶವೇ ಮುಂದಿನ ರಾಜಕೀಯ ಬೆಳವಣಿಗೆಗೆ ದಾರಿ ತೋರಲಿದೆ. ನಿಮ್ಮ ಪ್ರಕಾರ ಯಾರು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು ಎಂದು ಕಾಮೆಂಟ್ ಮಾಡಿ ಧನ್ಯವಾದಗಳು.