Feb 16, 2026 Languages : ಕನ್ನಡ | English

ಅಭಿವೃದ್ಧಿ ಇಲ್ಲ, ಕುರ್ಚಿ ಕಿತ್ತಾಟ ಮಾತ್ರ - ಶೋಭಾ ಕರಂದ್ಲಾಜೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೀದರ್‌ನಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ, ಬರೀ ಕುರ್ಚಿ ಕಿತ್ತಾಟ ಮಾತ್ರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಅವರು ತಮ್ಮ ಭಾಷಣದಲ್ಲಿ, “ಡಿಕೆ ಮುಖ್ಯಮಂತ್ರಿಯಾಗಬೇಕಾ..? ಸಿದ್ದರಾಮಯ್ಯ ಮುಂದುವರೆಯಬೇಕಾ..? ಅನ್ನೋ ಚರ್ಚೆ ಮಾತ್ರ ನಡೆಯುತ್ತಿದೆ. ಜನರ ಸಮಸ್ಯೆಗಳ ಬಗ್ಗೆ ಯಾವುದೇ ಗಮನವಿಲ್ಲ” ಎಂದು ಹೇಳಿದರು. ಕಾಂಗ್ರೆಸ್ ಸರ್ಕಾರವು ವಿಷಯಾಂತರ ಮಾಡಲು ಹಲವಾರು ಅಸ್ತ್ರಗಳನ್ನು ಬಳಸುತ್ತಿದೆ ಎಂದು ಅವರು ಆರೋಪಿಸಿದರು.

ಬೆಳಗಾವಿ ಅಧಿವೇಶನದ ಟೀಕೆ – ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡದ ಕಾಂಗ್ರೆಸ್ ಸರ್ಕಾರ
ಬೆಳಗಾವಿ ಅಧಿವೇಶನದ ಟೀಕೆ – ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡದ ಕಾಂಗ್ರೆಸ್ ಸರ್ಕಾರ

ಧ್ವೇಷ ಭಾಷಣ ತಡೆ ಕಾಯ್ದೆ ಕೂಡಾ ಕಾಂಗ್ರೆಸ್ ಸರ್ಕಾರದ ಒಂದು ಅಸ್ತ್ರ ಎಂದು ಶೋಭಾ ಕರಂದ್ಲಾಜೆ ಹೇಳಿದರು. “ನಮ್ಮ ಬಾಯಿ ಮುಚ್ಚಿಸಲು ಕಾಂಗ್ರೆಸ್ ವ್ಯವಸ್ಥಿತ ಷಡ್ಯಂತ್ರ ಮಾಡುತ್ತಿದೆ. ಸರ್ಕಾರದ ವಿರುದ್ಧ ಮಾತನಾಡಬಾರದು ಎಂದು ಒತ್ತಡ ಹೇರುತ್ತಿದೆ” ಎಂದು ಅವರು ಆರೋಪಿಸಿದರು. ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಎತ್ತಿ ತೋರಿಸಿದರು. ಗೃಹ ಸಚಿವ ಪರಮೇಶ್ವರ್ ಹಾಗೂ ಖರ್ಗೆ ಅವರ ಭೇಟಿಯ ವಿಚಾರವನ್ನು ಉಲ್ಲೇಖಿಸಿ, “ಕಾಂಗ್ರೆಸ್ ನಾಯಕರು ಎಲ್ಲರೂ ಸಿಎಂ ಹಾಗೂ ಕೆಪಿಸಿಸಿ ಪಟ್ಟಕ್ಕಾಗಿ ಹಾತೊರೆಯುತ್ತಿದ್ದಾರೆ. ಯಾರನ್ನ ಇಳಿಸಬೇಕು, ಯಾರನ್ನು ಉರುಳಿಸಬೇಕು ಎನ್ನುವ ಚರ್ಚೆ ಮಾತ್ರ ನಡೆಯುತ್ತಿದೆ” ಎಂದು ಹೇಳಿದರು.

ಬೆಳಗಾವಿಯಲ್ಲಿ ನಡೆದ ಅಧಿವೇಶನದ ಕುರಿತು ಮಾತನಾಡಿದ ಅವರು, “ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಮಾಡ್ತೀವಿ ಅಂತ ಹೇಳಿ HATE ಬಿಲ್ಲನ್ನ ತಂದ್ರು. ದ್ವೇಷ ಭಾಷಣ ತಡೆಯ ಕಾಯ್ದೆ ಬಿಟ್ಟು ಅಧಿವೇಶನದಲ್ಲಿ ಏನು ಮಾಡಿದ್ರು? ಉತ್ತರ ಕರ್ನಾಟಕಕ್ಕು ನ್ಯಾಯ ಕೊಡಲ್ಲ, ಕರ್ನಾಟಕಕ್ಕೂ ನ್ಯಾಯ ಕೊಡಲ್ಲ, ಯಾರಿಗೂ ನ್ಯಾಯ ಕೊಡಲ್ಲ” ಎಂದು ಆರೋಪಿಸಿದರು. ರಾಜ್ಯದಲ್ಲಿ ಬರೀ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು. “ಒಂದು ಕಡೆ ಪರಮೇಶ್ವರ್, ಇನ್ನೊಂದು ಕಡೆ ಖರ್ಗೆ, ಮತ್ತೊಂದು ಕಡೆ ಡಿಕೆ – ಎಲ್ಲರೂ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಯಾರಿಗೂ ಗಮನವಿಲ್ಲ” ಎಂದು ಅವರು ವಾಗ್ದಾಳಿ ನಡೆಸಿದರು.

ಬೀದರ್‌ನಲ್ಲಿ ನಡೆದ ಈ ಸಭೆಯಲ್ಲಿ ಶೋಭಾ ಕರಂದ್ಲಾಜೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿದ್ದು, ರಾಜ್ಯದ ರಾಜಕೀಯ ವಾತಾವರಣದಲ್ಲಿ ಮತ್ತೊಂದು ಚರ್ಚೆಗೆ ಕಾರಣವಾಗಿದೆ. 

Latest News