ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸ್ಥಳೀಯರಲ್ಲಿ ಆಕ್ರೋಶ ಮೂಡಿಸಿದೆ. ಬಡವರ ಜೀವದ ಜೊತೆ ಆಟವಾಡುತ್ತಿರುವಂತೆ ಕಂಡ ಈ ಘಟನೆಗೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಹೌದು ಎದೆ ನೋವಿನ ಹಿನ್ನೆಲೆ ಶೇಖರ್ ಎಂಬ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಅವರಿಗೆ ಇಸಿಜಿ ಪರೀಕ್ಷೆ ನಡೆಸಿ, ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಹೇಳಿ ಗ್ಯಾಸ್ಟ್ರಿಕ್ ಮಾತ್ರೆ ಸೇವಿಸಲು ಸಲಹೆ ನೀಡಿದರು. ಆದರೆ ಆಸ್ಪತ್ರೆಯ ಸಿಬ್ಬಂದಿ ನೀಡಿದ ಮಾತ್ರೆ ಅವಧಿ ಮೀರಿದದ್ದಾಗಿದ್ದು, ಕವರ್ ಒಳಗಡೆಯೇ ಕರಗಿ ನೀರಿನಂತೆ ಆಗಿರುವುದು ಗಮನಕ್ಕೆ ಬಂದಿದೆ.
ಈ ಘಟನೆ ತಿಳಿದ ರೋಗಿಗಳು ಹಾಗೂ ಅವರ ಕುಟುಂಬದವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. “ಸರ್ಕಾರಿ ಆಸ್ಪತ್ರೆಯಲ್ಲಿ ಬಡವರು ನಂಬಿಕೊಂಡು ಬರುತ್ತಾರೆ. ಆದರೆ ಇಲ್ಲಿ ನೀಡುವ ಔಷಧಿಗಳು ಅವಧಿ ಮೀರಿದವು. ಇದು ಬಡವರ ಜೀವದ ಜೊತೆ ಆಟವಾಡಿದಂತಾಗಿದೆ” ಎಂದು ಅವರು ಆರೋಪಿಸಿದರು. ಆಸ್ಪತ್ರೆಯ ಸಿಬ್ಬಂದಿಯ ಈ ನಿರ್ಲಕ್ಷ್ಯವನ್ನು ಸ್ಥಳೀಯರು ಖಂಡಿಸಿದ್ದಾರೆ. “ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರು ನಂಬಿಕೆ ಇಟ್ಟು ಬರುತ್ತಾರೆ. ಆದರೆ ಇಂತಹ ಬೇಜವಾಬ್ದಾರಿ ನಡೆಗಳು ಜನರ ಜೀವಕ್ಕೆ ಅಪಾಯ ಉಂಟುಮಾಡುತ್ತವೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದರು.
ಈ ಘಟನೆ ಮಾಧ್ಯಮಗಳಲ್ಲಿ ಬೆಳಕಿಗೆ ಬಂದ ನಂತರ, ಆರೋಗ್ಯ ಇಲಾಖೆಯ ಮೇಲ್ವಿಚಾರಣೆ ಹಾಗೂ ಆಸ್ಪತ್ರೆಯ ಒಳಗಿನ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳು ಎದ್ದಿವೆ. ಔಷಧಿ ವಿತರಣೆ, ಸಂಗ್ರಹಣೆ ಹಾಗೂ ಅವಧಿ ಪರಿಶೀಲನೆ ಈ ಎಲ್ಲಾ ಕಾರ್ಯಗಳಲ್ಲಿ ಗಂಭೀರ ನಿರ್ಲಕ್ಷ್ಯ ನಡೆದಿದೆ ಎಂಬುದು ಸ್ಪಷ್ಟವಾಗಿದೆ. ಸ್ಥಳೀಯರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. “ಬಡವರ ಜೀವದ ಜೊತೆ ಆಟವಾಡುವಂತಹ ಘಟನೆಗಳು ಮರುಕಳಿಸಬಾರದು.
ಆಸ್ಪತ್ರೆಯ ವ್ಯವಸ್ಥೆ ಸುಧಾರಿಸಬೇಕು” ಎಂಬ ಬೇಡಿಕೆ ಸಾರ್ವಜನಿಕರಿಂದ ಕೇಳಿಬಂದಿದೆ. ಹೌದು ಒಟ್ಟಿನಲ್ಲಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಈ ಘಟನೆ ಆರೋಗ್ಯ ಇಲಾಖೆಯ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದ್ದು, ಬಡವರ ಜೀವದ ಸುರಕ್ಷತೆಗಾಗಿ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಹೆಚ್ಚಾಗಿದೆ.