ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಅತಿಥಿ ಶಿಕ್ಷಕ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ಸ್ಥಳೀಯರಲ್ಲಿ ಚರ್ಚೆಗೆ ಕಾರಣವಾಗಿದೆ. ಶಾಲೆಯ ಆವರಣದಲ್ಲೇ ಕೈ ಕೈ ಮಿಲಾಯಿಸಿ ಪುಂಡರಂತೆ ಹೊಡೆದಾಡಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಹೆಚ್ಚು ವೈರಲ್ ಆಗಿವೆ.ಹೌದು ಮಕ್ಕಳಿಗೆ ಮಾದರಿಯಾಗಬೇಕಾದ ಶಿಕ್ಷಕರು ಮತ್ತು ಶಾಲಾ ಅಭಿವೃದ್ಧಿ ನಿರ್ವಹಣಾ ಸಮಿತಿ ಅಧ್ಯಕ್ಷರು ಪರಸ್ಪರ ವಾಗ್ವಾದಕ್ಕೆ ಇಳಿದಿದ್ದು, ನಂತರ ಅದು ಹೊಡೆದಾಟಕ್ಕೆ ತಿರುಗಿದೆ. ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆಯ ದಾದಾಗೀರಿ ಬೇಸತ್ತಿದ್ದ ಅತಿಥಿ ಶಿಕ್ಷಕ ಗಂಟೇರ್, ಅವಾಚ್ಯ ನಿಂದನೆಗೆ ಪ್ರತಿಕ್ರಿಯಿಸಿದ ಪರಿಣಾಮ ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಮಾತಿಗೆ ಮಾತು ಇಬ್ಬರ ನಡುವೆಯೂ ಬೆಳೆದು, ಶರ್ಟ್ ಹಿಡಿದು ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡಿರುವ ದೃಶ್ಯಗಳು ವಿದ್ಯಾರ್ಥಿಗಳ ಮುಂದೆ ನಡೆದಿರುವುದು ನಿಜಕ್ಕೂ ವಿಷಾದನೀಯ ಸಂಗತಿ ಎನ್ನಬಹುದು. ಈ ಘಟನೆಯಾ ದೃಶ್ಯ ಪೆಟ್ರೋಲ್ ಬಂಕ್ ಸಿಸಿಟಿವಿ ದೃಶ್ಯಗಳಂತೆ, ಶಾಲೆಯ ಆವರಣದಲ್ಲಿಯೇ ಸೆರೆಯಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಿಕ್ಷಕರು ಮತ್ತು ಅಧ್ಯಕ್ಷರು ಪರಸ್ಪರ ಹೊಡೆದಾಡುತ್ತಿರುವ ದೃಶ್ಯವನ್ನು ಕಂಡು ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಶಾಲೆಯ ಮಕ್ಕಳ ಮುಂದೆ ನಡೆದ ಈ ಘಟನೆ ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆಯಾಗಿದೆ ಎಂದು ಹೇಳಬಹುದು.
ಹಾನಗಲ್ ಪಟ್ಟಣದ ಶಾಸಕರ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ವಿದ್ಯಾರ್ಥಿಗಳ ಪರದಾಟಕ್ಕೆ ಕಾರಣವಾಗಿದೆ. ಪೂರ್ತಿ ಕಿತ್ತೋದ ಶೌಚಾಲಯ ಜೊತೆಗೆ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಶಾಲೆಯಲ್ಲಿ ಮುಂದುವರಿದಿವೆ. ಇಂತಹ ಸಮಸ್ಯೆಗಳನ್ನು ಬಗೆಹರಿಸಬೇಕಾದವರು ಪರಸ್ಪರ ಹೊಡೆದಾಡಿಕೊಂಡಿರುವುದು ಸಾರ್ವಜನಿಕರಲ್ಲಿ ಅಸಮಾಧಾನ ಮೂಡಿಸಿದೆ.
ಸ್ಥಳೀಯರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಅಭಿವೃದ್ಧಿ ಕಾರ್ಯಗಳನ್ನು ಬಿಟ್ಟು, ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ಶಿಕ್ಷಕರು ಮತ್ತು ಅಧ್ಯಕ್ಷರು ತೊಡಗಿರುವುದು ಖಂಡನೀಯವಾಗಿದೆ ಎಂದು ಅಭಿಪ್ರಾಯ ವ್ಯಕ್ತವಾಗಿದೆ. ಮಕ್ಕಳ ಶಿಕ್ಷಣದ ಮೇಲೆ ಗಮನ ಹರಿಸಬೇಕಾದವರು ಹೊಡೆದಾಟದಲ್ಲಿ ತೊಡಗಿರುವುದು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದೆ.
ಹಾವೇರಿ ಜಿಲ್ಲೆಯ ಈ ಘಟನೆ ಶಿಕ್ಷಣ ಕ್ಷೇತ್ರದ ಶಿಸ್ತಿಗೆ ಧಕ್ಕೆಯಾಗಿದೆ. ಶಿಕ್ಷಕರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಪರಸ್ಪರ ಹೊಡೆದಾಡಿಕೊಂಡಿರುವುದು ಆ ಶಾಲೆಯ ಗೌರವಕ್ಕೆ ಹಾನಿ ಮಾಡಿದೆ. ವಿದ್ಯಾರ್ಥಿಗಳ ಸಮಸ್ಯೆಗಳನ್ನು ಬಗೆಹರಿಸುವ ಬದಲು, ಅವರವರ ವೈಯಕ್ತಿಕ ಭಿನ್ನಾಭಿಪ್ರಾಯಕ್ಕೆ ತೊಡಗಿರುವುದು ವಿಷಾದನೀಯ. ಈ ಘಟನೆ ಶಿಕ್ಷಣ ಇಲಾಖೆಯ ಗಮನ ಸೆಳೆಯಬೇಕಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ ನೋಡಿ.