Dec 13, 2025 Languages : ಕನ್ನಡ | English

ಮತ್ತೆ ಮುನ್ನೆಲೆಗೆ ಬಂದ ಹಿಜಾಬ್ ಧರಿಸುವ ವಿಚಾರ!! ಕೇಸರಿ ಶಾಲ್ ಹಾಕಿಕೊಂಡೆ ಕಾಲೇಜಿನಲ್ಲಿ ಕುಳಿತ ವಿದ್ಯಾರ್ಥಿಗಳು

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಸಿ.ಜಿ ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ವಿದ್ಯಾರ್ಥಿಗಳ ಧಾರ್ಮಿಕ ಗುರುತುಗಳ ಪ್ರದರ್ಶನದಿಂದ ಕಾಲೇಜಿನ ವಾತಾವರಣ ಗಂಭೀರಗೊಂಡಿದ್ದು, ಸ್ಥಳೀಯ ಹಾಗೂ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ಹಾವೇರಿ ಜಿಲ್ಲೆಯ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ vs ಕೇಸರಿ ಶಾಲು ವಿವಾದ
ಹಾವೇರಿ ಜಿಲ್ಲೆಯ ಅಕ್ಕಿಆಲೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ vs ಕೇಸರಿ ಶಾಲು ವಿವಾದ

ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ನಿತ್ಯವೂ ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುತ್ತಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಪ್ರವೇಶಿಸಿದರು. ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಕ್ಲಾಸ್ ರೂಮ್‌ಗಳಲ್ಲಿ ಕುಳಿತಿರುವ ದೃಶ್ಯಗಳು ಗಮನ ಸೆಳೆದಿವೆ. ಈ ಕ್ರಮವು ಕಾಲೇಜಿನೊಳಗೆ ಧಾರ್ಮಿಕ ಗುರುತುಗಳ ಪ್ರದರ್ಶನವನ್ನು ಹೆಚ್ಚಿಸಿದೆ.

ಹಿಜಾಬ್ ಧರಿಸುವ ಪದ್ಧತಿ ಸಾಕಷ್ಟು ದಿನಗಳಿಂದ ಕಾಲೇಜಿನಲ್ಲಿ ನಡೆಯುತ್ತಿತ್ತು. ಆಡಳಿತ ಮಂಡಳಿಯಿಂದ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಹಿಂದೂ ವಿದ್ಯಾರ್ಥಿಗಳು ಪ್ರತೀಕಾರವಾಗಿ ಕೇಸರಿ ಶಾಲು ಧರಿಸಿದರು. ಇದರಿಂದ ಧಾರ್ಮಿಕ ಗುರುತು vs ಶಿಕ್ಷಣ ಸಂಸ್ಥೆಗಳ ನಿಯಮಾವಳಿ ಎಂಬ ಪ್ರಶ್ನೆ ಮತ್ತೆ ಎದ್ದಿದೆ.

ಕಾಲೇಜಿನ ಆಡಳಿತ ಮಂಡಳಿ ಈ ವಿವಾದದ ಬಗ್ಗೆ ಇನ್ನೂ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ವಿದ್ಯಾರ್ಥಿಗಳ ಧಾರ್ಮಿಕ ಉಡುಪು ಧಾರಣೆ ಕುರಿತು ನಿಯಮಾವಳಿ ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಶಿಕ್ಷಣ ಸಂಸ್ಥೆಗಳು ಸಮಾನತೆ ಮತ್ತು ಏಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸ್ಪಷ್ಟ ಮಾರ್ಗಸೂಚಿ ರೂಪಿಸುವ ಅಗತ್ಯತೆ ಇಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಈ ಘಟನೆ ಸ್ಥಳೀಯವಾಗಿ ಚರ್ಚೆಗೆ ಕಾರಣವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಚಿಹ್ನೆಗಳ ಪ್ರದರ್ಶನವು ವಿದ್ಯಾರ್ಥಿಗಳ ಏಕತೆಯನ್ನು ಹಾಳುಮಾಡಬಹುದೆಂಬ ಆತಂಕ ವ್ಯಕ್ತವಾಗಿದೆ. ಶಿಕ್ಷಣದ ಮೂಲ ಉದ್ದೇಶವಾದ ಜ್ಞಾನ, ಸಮಾನತೆ, ಮತ್ತು ಸಹಬಾಳ್ವೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಸಮಾಜದಲ್ಲಿ ಧಾರ್ಮಿಕ ವಿಭಜನೆಗೆ ಕಾರಣವಾಗುವಂತಹ ಪರಿಸ್ಥಿತಿ ಉಂಟಾಗಬಹುದು.

ಸರ್ಕಾರ ಮತ್ತು ಶಿಕ್ಷಣ ಇಲಾಖೆಗಳು ಸ್ಪಷ್ಟ ಮಾರ್ಗಸೂಚಿ ರೂಪಿಸಿ, ಧಾರ್ಮಿಕ ಗುರುತುಗಳನ್ನು ಗೌರವಿಸುವುದರ ಜೊತೆಗೆ ಶಿಕ್ಷಣ ಸಂಸ್ಥೆಗಳ ಏಕತೆಯನ್ನು ಕಾಪಾಡುವ ಸಮತೋಲನ ಸಾಧಿಸಬೇಕು. ವಿದ್ಯಾರ್ಥಿಗಳಲ್ಲಿ ಸಹಿಷ್ಣುತೆ ಮತ್ತು ಪರಸ್ಪರ ಗೌರವ ಬೆಳೆಸುವ ಜಾಗೃತಿ ಕಾರ್ಯಕ್ರಮಗಳು ಅಗತ್ಯ.

Latest News