Jan 25, 2026 Languages : ಕನ್ನಡ | English

ಚಿತ್ರದುರ್ಗದಲ್ಲಿ ಬೆಂಕಿ ಅವಘಡ: ಬಸ್–ಲಾರಿ ಡಿಕ್ಕಿ, ಭೀಕರ ದೃಶ್ಯಗಳು

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಖಾಸಗಿ ಬಸ್ ಹಾಗೂ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಹಲವರು ಸುಟ್ಟು ಕರಕಲಾಗಿರುವ ಮಾಹಿತಿ ಲಭ್ಯವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ವ್ಯಕ್ತವಾಗಿದೆ.

ಹಿರಿಯೂರಿನ ಬಳಿ ಬಸ್‌ಗೆ ಬೆಂಕಿ: ಪ್ರಯಾಣಿಕರ ಜೀವ ಹಾರಿ ಹೋದ ದುರಂತ
ಹಿರಿಯೂರಿನ ಬಳಿ ಬಸ್‌ಗೆ ಬೆಂಕಿ: ಪ್ರಯಾಣಿಕರ ಜೀವ ಹಾರಿ ಹೋದ ದುರಂತ

ಅಪಘಾತದ ವಿವರ

ಮಾಹಿತಿಯ ಪ್ರಕಾರ, ಬೆಂಗಳೂರಿನಿಂದ ದಾಂಡೇಲಿಗೆ ಪ್ರವಾಸಕ್ಕೆ ಹೊರಟಿದ್ದ ಖಾಸಗಿ ಬಸ್‌ ಜವನಗೊಂಡಹಳ್ಳಿ ಬಳಿ ಅತಿವೇಗದಲ್ಲಿ ಸಾಗುತ್ತಿದ್ದಾಗ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ಗೆ ತಕ್ಷಣವೇ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ಬೆಂಕಿಯ ಕನ್ನಾಲಿಗೆಗೆ ಸಿಲುಕಿದ್ದಾರೆ.

ಬೆಂಕಿ ಅವಘಡ

ಲಾರಿ ಇದ್ದಕ್ಕಿದ್ದಂತೆ ಡಿವೈಡರ್ ಜಂಪ್ ಮಾಡಿ ಬಸ್‌ಗೆ ಡಿಕ್ಕಿ ಹೊಡೆದಿದೆ. ನಂತರ ಬಸ್ ಮತ್ತೊಂದು ವಾಹನಕ್ಕೂ ಡಿಕ್ಕಿ ಹೊಡೆದಿದೆ. ಲಾರಿಯಿಂದ ಡೀಸೈಲ್ ಲೀಕ್ ಆಗಿ ಸ್ಪಾರ್ಕ್ ಉಂಟಾದ ಕಾರಣ ಬೆಂಕಿ ತೀವ್ರಗೊಂಡಿರಬಹುದು ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.

ಗಾಯಾಳುಗಳ ಸ್ಥಿತಿ

ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಬೆಂಕಿಯ ತೀವ್ರತೆಯಿಂದಾಗಿ ಹಲವರು ಸುಟ್ಟು ಕರಕಲಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಗಾಯಾಳುಗಳು ಘಟನೆಯನ್ನು ನೆನೆದು ಬೆಚ್ಚಿಬಿದ್ದಿದ್ದಾರೆ.

ಸಾಕ್ಷಿಗಳ ಹೇಳಿಕೆ

ಅಪಘಾತವನ್ನು ಕಂಡ ಸಾಕ್ಷಿಗಳು, “ನಾವು ಬೆಂಗಳೂರಿನಿಂದ ದಾಂಡೇಲಿಗೆ ಪ್ರವಾಸಕ್ಕೆ ಹೊರಟಿದ್ದೆವು. ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಲಾರಿ ಇದ್ದಕ್ಕಿದ್ದಂತೆ ಡಿವೈಡರ್ ಜಂಪ್ ಮಾಡಿ ಬಸ್‌ಗೆ ಡಿಕ್ಕಿ ಹೊಡೆದಿತು. ನಂತರ ಬಸ್ ನಮ್ಮ ವಾಹನಕ್ಕೂ ಡಿಕ್ಕಿ ಹೊಡೆದಿದೆ” ಎಂದು ವಿವರಿಸಿದ್ದಾರೆ.

ರಕ್ಷಣಾ ಕಾರ್ಯ

ಅಪಘಾತದ ನಂತರ ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವ ಕಾರ್ಯ ನಡೆಯುತ್ತಿದೆ. ಈ ಭೀಕರ ಅಪಘಾತದಿಂದ ಚಿತ್ರದುರ್ಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿದ್ದಾರೆ. ಅಪಘಾತದ ನಿಖರ ಕಾರಣ ತಿಳಿಯಲು ತನಿಖೆ ಆರಂಭವಾಗಿದೆ.

ಜವನಗೊಂಡನಹಳ್ಳಿ ಬಸ್ ಭೀಕರ ಅಪಘಾತ

  • ಅಪಘಾತ ಸ್ಥಳ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ.
  • ಘಟನೆ: ಎದುರಿಗೆ ಬರುತ್ತಿದ್ದ ಕಂಟೈನರ್ ಲಾರಿ ಡಿವೈಡರ್ ಹತ್ತಿ ಬಸ್‌ಗೆ ಡಿಕ್ಕಿ ಹೊಡೆದಿದೆ.
  • ಕಾರಣ: ಲಾರಿ ಡೀಸೆಲ್ ಟ್ಯಾಂಕ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿದೆ.
  • ಸಾವುಗಳು: ಬಸ್‌ನಲ್ಲಿದ್ದ 8 ಪ್ರಯಾಣಿಕರು ಹಾಗೂ ಲಾರಿ ಚಾಲಕ ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.

ಗಾಯಾಳುಗಳು

  • 12 ಜನರನ್ನು ಹಿರಿಯೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
  • 9 ಜನರನ್ನು ಶಿರಾ ಆಸ್ಪತ್ರೆಗೆ ದಾಖಲಿಸಲಾಗಿದೆ.
  • 3 ಜನರನ್ನು ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
  • ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾದವರಲ್ಲಿ ಕೆಲವರ ಸ್ಥಿತಿ ಗಂಭೀರ.
  • ಮಗು: ಒಂದು ಮಗು ಹೋಲುವ ಜವ ಪತ್ತೆಯಾಗಿದೆ, ಅದರ ವಿವರ ಇನ್ನೂ ತಿಳಿದುಬರಬೇಕಿದೆ.
  • ಅಧಿಕಾರಿಗಳ ಹೇಳಿಕೆ: ಪೂರ್ವವಲಯ ಐಜಿಪಿ ರವಿಕಾಂತೇಗೌಡ ಅವರು ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.
  • ಮುಂದಿನ ಕ್ರಮ: ಮೃತದೇಹಗಳಿಗೆ ಮರಣೋತ್ತರ ಪರೀಕ್ಷೆ ಹಾಗೂ ಡಿಎನ್‌ಎ ಪರೀಕ್ಷೆ ನಡೆಸಿ, ನಂತರ ಪಾರ್ಥಿವ ಶರೀರವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗುವುದು.

Latest News