Feb 16, 2026 Languages : ಕನ್ನಡ | English

ಎಫಸ್ಟಿನ್ ಫೈಲ್ ವಿವಾದ – ಮೋದಿ ವಿರುದ್ಧ ದೊಡ್ಡಮಟ್ಟದಲ್ಲಿ ಭುಗಿಲೆದ್ದ ಆಕ್ರೋಶ!!

ಕಲಬುರಗಿ: 'ಜೆಫ್ರಿ ಎಫಸ್ಟಿನ್' ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಉಲ್ಲೇಖಗೊಂಡಿರುವ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಹೌದು, ಈ ಪ್ರತಿಭಟನೆಯ ವಿವರ ನೋಡುವುದಾದರೆ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಟೈಯರ್‌ಗಳಿಗೆ ಬೆಂಕಿ ಹಚ್ಚಿ, ಪ್ರಧಾನಿ ಮೋದಿ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ತೋರಿಸಿದ ಘಟನೆ ಕಂಡು ಬಂದಿತು. 

ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು!!
ಬಿಜೆಪಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು!!

ಪ್ರತಿಭಟನಾಕಾರರು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಘೋಷಣೆಗಳನ್ನು ನೀಡಿದರು. ಪ್ರಧಾನಿ ಮೋದಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಈ ಘಟನೆ ಕಲಬುರಗಿಯಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರು ಎಫಸ್ಟಿನ್ ಫೈಲ್‌ನಲ್ಲಿ ಉಲ್ಲೇಖಗೊಂಡಿರುವ ಹೆಸರು ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಜನರ ಮುಂದೆ ಸತ್ಯ ಹೊರಬರಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಭದ್ರತೆ ಹೆಚ್ಚಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಕಾಂಗ್ರೆಸ್ ಕಾರ್ಯಕರ್ತರ ಈ ಪ್ರತಿಭಟನೆ, ಎಫಸ್ಟಿನ್ ಪ್ರಕರಣದ ರಾಜಕೀಯ ಪರಿಣಾಮವನ್ನು ತೋರಿಸುವುದರ ಜೊತೆಗೆ, ಪ್ರಧಾನಿ ಮೋದಿ ವಿರುದ್ಧದ ಬೇಡಿಕೆಯನ್ನು ಸ್ಪಷ್ಟಪಡಿಸಿದೆ. ಕಲಬುರಗಿಯಲ್ಲಿ ನಡೆದ ಈ ಪ್ರತಿಭಟನೆ, ಎಫಸ್ಟಿನ್ ಫೈಲ್ ಪ್ರಕರಣದ ರಾಜಕೀಯ ಪರಿಣಾಮವನ್ನು ತೋರಿಸುವುದರ ಜೊತೆಗೆ, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಮತ್ತು ಬೇಡಿಕೆಯನ್ನು ಮತ್ತೊಮ್ಮೆ ಬೆಳಕಿಗೆ ತಂದಿದೆ.

Latest News