Feb 16, 2026 Languages : ಕನ್ನಡ | English

Time Will Answer’ – ಸಿಎಂ ಕನಸಿನ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು ನೀವೆ ನೊಡಿ!!

ರಾಜ್ಯ ರಾಜಕಾರಣದಲ್ಲಿ ಮತ್ತೆ ಸಿಎಂ ಕುರ್ಚಿಯ ವಿಚಾರ ಭಾರೀ ಚರ್ಚೆಯಾಗುತ್ತಿದೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಎಂಎಲ್‌ಸಿ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಯ ಬಳಿಕ, ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರತಿಕ್ರಿಯೆ ಇದೀಗ ಸುದ್ದಿಯ ಕೇಂದ್ರವಾಗಿದೆ. ಡಿಕೆ ಶಿವಕುಮಾರ್ ಮಾತನಾಡುತ್ತಾ, “ನಾನು ಸಿಎಂ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತೆ. ಜನರಿಗೆ, ಶಾಸಕರಿಗೆ ನಾನು ಸಿಎಂ ಆಗಬೇಕು ಅನ್ನೋ ಬಯಕೆ ಇದೆ. ಆದರೆ ಅಂತಿಮ ತೀರ್ಮಾನ ಪಕ್ಷದ್ದೇ. ಹೈಕಮಾಂಡ್ ಏನು ಹೇಳುತ್ತೋ ಅದೇ ನಡೆಯುತ್ತದೆ” ಎಂದು ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ – ಸಿಎಂ ಚರ್ಚೆ ತೀವ್ರತೆ
ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ – ಸಿಎಂ ಚರ್ಚೆ ತೀವ್ರತೆ

ಈ ವಿಚಾರದಲ್ಲಿ ಅವರು ಮತ್ತೆ ಮತ್ತೆ ಹೇಳಿದ ಒಂದು ಮಾತು – “Time Will Answer”. ಬಜೆಟ್ ನಂತರ ನೀವು ಸಿಎಂ ಆಗ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, “ಇದಕ್ಕೆ ಈಗ ಉತ್ತರ ಕೊಡಲು ಸಾಧ್ಯವಿಲ್ಲ. ಸಮಯವೇ ಎಲ್ಲಕ್ಕೂ ಉತ್ತರ ಕೊಡುತ್ತದೆ” ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ತಮ್ಮನ್ನು ಸಿಎಂ ಮಾಡಬೇಕು ಎಂದು ಅಭಿಮಾನಿಗಳು ಘೋಷಣೆ ಕೂಗುತ್ತಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ಅವರವರ ಅಭಿಮಾನಿಗಳಿಗೆ ಅವರವರ ಆಸೆಗಳು ಇರುತ್ತವೆ. ಅದರಲ್ಲಿ ತಪ್ಪೇನಿಲ್ಲ” ಎಂದರು. ಇದರಿಂದ ಅವರು ಯಾವುದೇ ಗೊಂದಲ ಸೃಷ್ಟಿಸುವುದನ್ನು ತಪ್ಪಿಸಿಕೊಂಡಂತೆ ಕಾಣಿಸಿಕೊಂಡಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?

ಇತ್ತ, ಎಂಎಲ್‌ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಬದಲಾವಣೆ ಬಗ್ಗೆ ಸ್ಪಷ್ಟ ಮಾತುಗಳನ್ನಾಡಿದ್ದಾರೆ. ಬೀದರ್‌ನಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯೇ ಇಲ್ಲ” ಎಂದು ಹೇಳಿದ್ದಾರೆ. “ನಿರ್ಣಯ ತೆಗೆದುಕೊಳ್ಳೋದು ಹೈಕಮಾಂಡ್. ಸದ್ಯಕ್ಕೆ ನಾಯಕತ್ವ ಬದಲಾವಣೆ ಬಗ್ಗೆ ಯಾರೂ ಏನೂ ಹೇಳಿಲ್ಲ. ಸಿಎಂ ಮುಂದುವರಿಯಲ್ಲ ಅನ್ನೋಕೆ ಯಾವುದೇ ಕಾರಣಗಳಿಲ್ಲ” ಎಂದು ಯತೀಂದ್ರ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದ್ದಾರೆ. ಕೊನೆಯದಾಗಿ ಸಿಎಂ ಕುರ್ಚಿ ಕುರಿತ ಚರ್ಚೆ ಜೋರಾಗಿದ್ದರೂ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಅದುವರೆಗೆ ರಾಜಕೀಯ ವಲಯದಲ್ಲಿ ಪ್ರಶ್ನೆ ಒಂದೇ ಎಲ್ಲದಕ್ಕೂ ಸಮಯ ಉತ್ತರ ಕೊಡುತ್ತದೆ ಎಂದು ಕೇಳಿ ಬರುತ್ತಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಕಾದು ನೋಡಬೇಕು.

Latest News