ರಾಜ್ಯದ ರಾಜಕೀಯದಲ್ಲಿ ಇದೀಗ ಈ ವಿಷಯ ಸಕತ್ ಸದ್ದು ಮಾಡುತ್ತಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಇದೀಗ ಹೆಚ್ಚು ತೀವ್ರಗೊಂಡಿವೆ ಎಂದರೆ ತಪ್ಪಾಗಲಾರದು. ನವೆಂಬರ್‌ನಲ್ಲಿ ಕ್ರಾಂತಿ ಸಂಭವಿಸಲಿದೆ ಎಂಬ ಊಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಹೀಗಿರುವಾಗ ವಿಪಕ್ಷ ನಾಯಕ ಆರ್. ಅಶೋಕ್ ಅವರ ಆರೋಪ ಈ ರೀತಿ ಕೇಳಿ ಬಂದಿದೆ ನೋಡಿ.
ವಿಪಕ್ಷ ನಾಯಕ ಆರ್. ಅಶೋಕ್ ಅವರು, ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ದೂರಿದ್ದಾರೆ. “ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ನಡೆಯುತ್ತಿರುವ ಕಾದಾಟದಿಂದ ಸರ್ಕಾರ ಸತ್ತು ಹೋಗಿದೆ” ಎಂದು ಅವರು ಆರೋಪಿಸಿದರು. ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಸ್ಥಾನದಲ್ಲಿ ಕೂರಿಸಬೇಕೆಂದು ಅವರ ಪರ ಶಾಸಕರು ಹೋರಾಟ ಮಾಡುತ್ತಿರುವುದನ್ನು ಅವರು ಉಲ್ಲೇಖಿಸಿದರು.
ಜೊತೆಗೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಮಾತನಾಡಿದ ಅಶೋಕ್ ಅವರು, ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ತೀರ್ಮಾನ ನೀಡದಿದ್ದರೆ ಸರ್ಕಾರ ನಡೆಯುವುದಿಲ್ಲ ಎಂದು ಹೇಳಿದರು. ಅಧಿಕಾರಿಗಳು ಕೆಲಸ ಮಾಡುತ್ತಿಲ್ಲ, ಆಡಳಿತಯಂತ್ರ ಕೋಮಾದಲ್ಲಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಕಾಳಜಿ ಇಲ್ಲ ಎಂದು ಅವರು ಆರೋಪಿಸಿದರು. ಇನ್ನೊಂದು ವಿಚಾರಡಾ ಬಗ್ಗೆ ಹೇಳಿದ ಅವರು, ರಾಜ್ಯದ ಪರಿಸ್ಥಿತಿ ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗಿವೆ, ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ವಿದ್ಯಾರ್ಥಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಅಶೋಕ್ ಹೇಳಿದರು.
ರಾಜ್ಯದಲ್ಲಿ ಯಾರು ಮುಖ್ಯಮಂತ್ರಿ ಎಂಬುದು ಸ್ಪಷ್ಟವಾಗಿಲ್ಲ. ರಾಹುಲ್ ಗಾಂಧಿ ವೀಕ್ ಲೀಡರ್, ರಾಜ್ಯದಲ್ಲಿ ವೀಕ್ ನಾಯಕತ್ವ ಎದ್ದು ಕಾಣುತ್ತಿದೆ” ಎಂದು ಅವರು ಟೀಕಿಸಿದರು. ಕಾಂಗ್ರೆಸ್‌ನ ಇಬ್ಬರು ಶಾಸಕರು ಜೈಲಲ್ಲಿರುವುದನ್ನು ಉಲ್ಲೇಖಿಸಿದ ಅಶೋಕ್, ಅವರ ಮತಗಳನ್ನು ಕೇಳಲು ಡಿಕೆ ಶಿವಕುಮಾರ್ ಜೈಲಿಗೆ ಹೋಗಿರುವುದನ್ನು ಶೋಚನೀಯವೆಂದು ಹೇಳಿದರು. 136 ಶಾಸಕರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಕಾಂಗ್ರೆಸ್ ವಿಫಲವಾಗಿದೆ ಎಂದು ಅವರು ಆರೋಪಿಸಿದರು. “ವಿರೋಧ ಪಕ್ಷ ಬಲವಾಗಿದೆ, ಸರ್ಕಾರಕ್ಕೆ ಅಂಕುಶ ಹಾಕಲು ನಾವು ಇದ್ದೇವೆ ಮತ್ತು ಅದನ್ನು ಸಮರ್ಥವಾಗಿ ಮಾಡುತ್ತಿದ್ದೇವೆ” ಎಂದು ಬಿಜೆಪಿ ತನ್ನ ನಿಲುವನ್ನು ಸಮರ್ಥಿಸಿಕೊಂಡಿದೆ.