ರಾಜ್ಯದಲ್ಲಿ ಇದೀಗ ಸಿಎಂ ಕುರ್ಚಿಗಾಗಿ ಮುಂದಿನ ಹಂತದಲ್ಲಿ ಯಾರು ಇದಕ್ಕೆ ಸೂಕ್ತ ಎನ್ನುವ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿಯೇ ಮುಂದುವರೆಯಬೇಕಾ, ಅಥ್ವಾ ಡಿಕೆಶಿ ಸಿಎಂ ಕುರ್ಚಿ ಅಲಂಕರಿಸಬೇಕಾ ಎಂದು ಹೆಚ್ಚು ಚರ್ಚೆ ನಡೆಯುತಲಿದ್ದು ಇದರ ಮುಂದಿನ ಹಂತದ ಬೆಳವಣಿಗೆ ಇದೀಗ ಇನ್ನಷ್ಟು ಕುತೂಹಲ ಎದ್ದಿದೆ ಎನ್ನಬಹುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನಿಂದ ದೆಹಲಿಗೆ ವಾಪಸ್ ಆಗಿದ್ದು, ರಾಜ್ಯದ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಅನೇಕ ನಾಯಕರ ಅಭಿಪ್ರಾಯ ಕಲೆಹಾಕಿರುವ ನಂತರ ಖರ್ಗೆ ಅವರ ಮುಂದಿನ ನಡೆ ಏನಾಗಲಿದೆ ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಡುವೆ ನಡೆಯುತ್ತಿರುವ ಗೊಂದಲವನ್ನು ಪರಿಹರಿಸಲು ಹೈಕಮಾಂಡ್ ಮುಹೂರ್ತ ನಿಗದಿ ಮಾಡಿದೆ ಎಂಬ ಮಾಹಿತಿ ಹೊರಬಂದಿದೆ. ನವೆಂಬರ್ 29ರಂದು ದೆಹಲಿಯಲ್ಲಿ ಸಂಧಾನ ಮಾತುಕತೆ ನಡೆಯುವ ಸಾಧ್ಯತೆ ಇದ್ದು, ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ಈ ಚರ್ಚೆ ನಡೆಯಲಿದೆ ಎಂದು ಕೇಳಿ ಬಂದಿದೆ. ಪಕ್ಷದ ನಾಯಕ ಬಿಕೆ ಹರಿಪ್ರಸಾದ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಹೈಕಮಾಂಡ್ ಈಗಾಗಲೇ ಚರ್ಚೆ ನಡೆಸಿದ್ದು, ಸಿಎಂ ಸ್ಥಾನ ಹಂಚಿಕೆ ಕುರಿತ ಗೊಂದಲಕ್ಕೆ ತೆರೆ ಎಳೆಯಲು ಹೈಕಮಾಂಡ್ ಮಧ್ಯಪ್ರವೇಶ ಮಾಡಲಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ. ಹೀಗಾಗಿ ಸಿಎಂ ಮತ್ತು ಡಿಸಿಎಂಗೆ ಶೀಘ್ರದಲ್ಲೇ ದೆಹಲಿಗೆ ಬರುವಂತೆ ಸೂಚನೆ ನೀಡುವ ಸಾಧ್ಯತೆ ಇದೆ.
ಇದೇ ವೇಳೆ, ಸಚಿವ ಶಿವಾನಂದ ಪಾಟೀಲ್ ಅವರು ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲು ಅತ್ಯಂತ ಸೂಕ್ತ ವ್ಯಕ್ತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಂದು ಕಾಲದಲ್ಲಿ ಖರ್ಗೆ ವಿಚಾರದಲ್ಲಿ ನಾನು ತಪ್ಪು ಮಾಡಿದ್ದೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಕುರ್ಚಿ ಕದನದ ನಡುವೆ ಮಾಜಿ ಸಿಎಂ ಡಿವಿ ಸದಾನಂದಗೌಡ ಅವರು, ಡಿಕೆ ಶಿವಕುಮಾರ್ ಬಾಹ್ಯ ಬೆಂಬಲ ನೀಡಿದರೆ ನಾವು ಸಿದ್ಧ ಎಂದು ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನಾನು ಅವರ ವಕ್ತಾರ ಅಲ್ಲ ಎಂದು ತಿರುಗೇಟು ನೀಡಿದ್ದಾರೆ. ಪ್ರತಿಪಕ್ಷ ನಾಯಕ ಆರ್ ಅಶೋಕ್ ಮಾತ್ರ, ನಾವು ಡಿಕೆಶಿ ಸಹವಾಸ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿದ್ದು, ಗುರುವಾರದ ವೇಳೆಗೆ ಮತ್ತಷ್ಟು ರೋಚಕತೆ ಪಡೆಯುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಏನಾಗುತ್ತೋ ಕಾದು ನೋಡೋಣ. ನಿಮ್ಮ ಪ್ರಕಾರ ಯಾರು ಸಿಎಂ ಸ್ಥಾನಕ್ಕೆ ಸೂಕ್ತ ಅನಿಸುತ್ತಾರೆ ಎಂದು ನಿಮ್ಮಭಿಪ್ರಾಯ ವ್ಯಕ್ತಪಡಿಸಿ ಧನ್ಯವಾದಗಳು