Jan 25, 2026 Languages : ಕನ್ನಡ | English

ಹವಾಮಾನ ವರದಿ - ಇಂದು ಈ 9 ಜಿಲ್ಲೆಗಳಲ್ಲಿ ಕೊಂಚ ಚಳಿ ಜೊತೆ ಮಳೆ ಬರುವ ಸಾಧ್ಯತೆ ಹೆಚ್ಚು!!

ರಾಜ್ಯದ ಬಹುತೇಕ ಭಾಗಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಕೆಲವೆಡೆ ಮಾತ್ರ ಕಡಿಮೆಯಾಗಿದೆ. ಹೌದು ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ಹೌದು ಬೆಂಗಳೂರು ನಗರದಲ್ಲಿ ಇಂದು (ಜನವರಿ 17) ಬೆಳಗ್ಗೆ ದಟ್ಟ ಮಂಜು ಮತ್ತು ಮೋಡ ಕವಿದ ವಾತಾವರಣ ಕಂಡುಬಂದಿದೆ. 

ಚಂಡಮಾರುತದ ಪರಿಣಾಮ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಚಂಡಮಾರುತದ ಪರಿಣಾಮ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ನಗರದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆಯಂತೆ. ಅಸಲಿಗೆ ಮಳೆಯಾಗುವ ಜಿಲ್ಲೆಗಳು ಯಾವುವು ಅಂದರೆ ಹೀಗಿವೆ ನೋಡಿ. ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.  

ಚಳಿ ಹೆಚ್ಚಿರುವ ಪ್ರದೇಶಗಳ ಬಗ್ಗೆ ನೋಡುವುದಾದರೆ, ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಚಳಿ ಜೊತೆಗೆ ಒಣಹವೆ ವಾತಾವರಣ ಮುಂದುವರಿಯಲಿದೆ ಎನ್ನಲಾಗುತ್ತಿದೆ.  ಹಾಗೇನೇ ದಕ್ಷಿಣ ಒಳನಾಡಿನ ಹವಾಮಾನ  ನೋಡುವುದಾದರೆ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಹಾಸನ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಹ ಒಣಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.  

ಒಟ್ಟಾರೆಯಾಗಿ ಉತ್ತರ ಕರ್ನಾಟಕದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ದಕ್ಷಿಣ ಭಾಗದಲ್ಲಿ ಸಾಧಾರಣ ಚಳಿ ಜೊತೆಗೆ ಕೆಲವೆಡೆ ಮಳೆಯ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ನಡುವೆ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜನರು ತಮ್ಮ ದಿನಚರಿಯಲ್ಲಿ ತಕ್ಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಸೂಕ್ತ.  

Latest News