Feb 16, 2026 Languages : ಕನ್ನಡ | English

ಗೌರಿ ಲಂಕೇಶ್ ಪ್ರಕರಣದ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆಲುವು - ಚುನಾವಣೆ ಫಲಿತಾಂಶ ಹೀಗಿದೆ!!

ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ವಾರ್ಡ್ ನಂಬರ್ 13ರಲ್ಲಿ ನಡೆದ ಸ್ಥಳೀಯ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಹೊರಬಂದಿದೆ. ಪತ್ರಕರ್ತೆ ಹಾಗೂ ಹೋರಾಟಗಾರ್ತಿ ಗೌರಿ ಲಂಕೇಶ್ ಅವರ ಜೀವಹಾನಿ ಪ್ರಕರಣದಲ್ಲಿ ಆರೋಪಿ ಎಂದು ಹೆಸರು ಮಾಡಿರುವ ಶ್ರೀಕಾಂತ್ ಪಂಗಾರ್ಕರ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಜಯ ಸಾಧಿಸಿದ್ದಾರೆ ಎನ್ನಲಾಗುತ್ತಿದೆ. ಹೌದು ಈ ಚುನಾವಣೆಯಲ್ಲಿ ಒಟ್ಟು 11 ಮಂದಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಪಂಗಾರ್ಕರ್ ಅವರ ಜಯ ವಿಶೇಷ ಚರ್ಚೆಗೆ ಕಾರಣವಾಗಿದೆ. 

ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ಗೌರಿ ಜೀವಹಾನಿ ಆರೋಪಿ – ವಿವಾದಾತ್ಮಕ ಗೆಲುವು
ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿದ ಗೌರಿ ಜೀವಹಾನಿ ಆರೋಪಿ – ವಿವಾದಾತ್ಮಕ ಗೆಲುವು

ಅವರು ಬಿಜೆಪಿ ಅಭ್ಯರ್ಥಿಯನ್ನು 2,621 ಮತಗಳ ಅಂತರದಿಂದ ಸೋಲಿಸಿ ಗೆಲುವು ದಾಖಲಿಸಿದ್ದಾರೆ. ಶಿಂಧೆ ಬಣದ ಶಿವಸೇನೆ ಈ ವಾರ್ಡ್‌ನಲ್ಲಿ ಅಭ್ಯರ್ಥಿಯನ್ನು ನಿಲ್ಲಿಸದ ಕಾರಣ, ಪಂಗಾರ್ಕರ್ ಸ್ವತಂತ್ರವಾಗಿ ಸ್ಪರ್ಧಿಸಿ ಜನಮನ್ನಣೆ ಪಡೆದಿದ್ದಾರೆ. ಶ್ರೀಕಾಂತ್ ಪಂಗಾರ್ಕರ್ 2001 ರಿಂದ 2006ರವರೆಗೆ ಶಿವಸೇನೆ ಸದಸ್ಯರಾಗಿದ್ದರು. ನಂತರ ಅವರು ಹಿಂದೂ ಜನಜಾಗೃತಿ ಸಮಿತಿಗೆ ಸೇರ್ಪಡೆಗೊಂಡರು. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಗುಂಡಿಕ್ಕಿ ಹತ್ಯೆಗೀಡಾದ ಪ್ರಕರಣದಲ್ಲಿ ಪಂಗಾರ್ಕರ್ ಅವರ ಹೆಸರು ಹೊರಬಂದಿತ್ತು. 

2018ರಲ್ಲಿ ಸ್ಫೋಟ ಪ್ರಕರಣ ಹಾಗೂ ಗೌರಿ ಲಂಕೇಶ್ ಜೀವಹಾನಿ ಪ್ರಕರಣದಲ್ಲಿ ಅವರನ್ನು ಬಂಧಿಸಲಾಯಿತು. 2024ರಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದ ಪಂಗಾರ್ಕರ್, ಅದೇ ವರ್ಷದ ನವೆಂಬರ್‌ನಲ್ಲಿ ಶಿಂಧೆ ಬಣದ ಶಿವಸೇನೆಗೆ ಸೇರ್ಪಡೆಗೊಂಡಿದ್ದರು. ಆದರೆ ಅವರ ಸೇರ್ಪಡೆಗೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಪಕ್ಷವು ತಡೆಹಿಡಿಯಿತು.ಹೌದು ಗೌರಿ ಲಂಕೇಶ್ ಅವರ ಜೀವಹಾನಿ ಪ್ರಕರಣ ಇನ್ನೂ ವಿಚಾರಣಾ ಹಂತದಲ್ಲಿದೆ. ಪಂಗಾರ್ಕರ್ ತಮ್ಮ ಮೇಲಿನ ಆರೋಪಗಳು ಸಾಬೀತಾಗಿಲ್ಲ ಎಂದು ಹೇಳಿಕೊಂಡಿದ್ದಾರೆ.

ನನ್ನ ವಿರುದ್ಧ ದೋಷಾರೋಪಣೆ ಸಾಬೀತಾಗಿಲ್ಲ, ಶಿಕ್ಷೆಯಾಗಿಲ್ಲ. ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ನನಗೆ ಹಕ್ಕಿದೆ ಎಂದು ಅವರು ಸಮರ್ಥಿಸಿಕೊಂಡಿದ್ದರು. ಈ ಗೆಲುವು ಮಹಾರಾಷ್ಟ್ರದಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ವಿವಾದಾತ್ಮಕ ವ್ಯಕ್ತಿ ಜನಮನ್ನಣೆ ಪಡೆದಿರುವುದು ಹಲವರಲ್ಲಿ ಅಚ್ಚರಿ ಮೂಡಿಸಿದೆ. ಪಂಗಾರ್ಕರ್ ಅವರ ಜಯವು ಸ್ಥಳೀಯ ರಾಜಕೀಯದಲ್ಲಿ ಹೊಸ ಚರ್ಚೆಗಳಿಗೆ ದಾರಿ ಮಾಡಿಕೊಟ್ಟಿದೆ ಎನ್ನಬಹುದು. ಒಟ್ಟಿನಲ್ಲಿ, ಜಾಲ್ನಾ ವಾರ್ಡ್ ನಂಬರ್ 13ರಲ್ಲಿ ನಡೆದ ಈ ಫಲಿತಾಂಶವು ಕೇವಲ ಸ್ಥಳೀಯ ರಾಜಕೀಯವಲ್ಲ, ರಾಷ್ಟ್ರಮಟ್ಟದ ಚರ್ಚೆಗೆ ಕಾರಣವಾಗಿದ್ದು, ಇನ್ನೂ ವಿಚಾರಣೆಯಲ್ಲಿರುವ ಪ್ರಕರಣದ ಆರೋಪಿ ಜನಮನ್ನಣೆ ಪಡೆದಿರುವುದು ವಿಶೇಷ ಗಮನ ಸೆಳೆದಿದೆ ಎನ್ನುತ್ತಿದ್ದಾರೆ ಅವರ ಹಿಂಬಾಲಕರು. 

Latest News