ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಾಟಾಳ್ ನಾಗರಾಜ್ ಅವರು ರಾಜ್ಯ ರಾಜಕೀಯದ ಪ್ರಮುಖ ವಿಷಯವಾದ ಸಿಎಂ ಬದಲಾವಣೆ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಅವರು ಸ್ಪಷ್ಟವಾಗಿ ಹೇಳಿದ್ದು, “ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯಕ್ಕೆ ಅನ್ಯಾಯ ಹಾಗೂ ಅಪಾಯಕಾರಿ. ದುಡುಕಿ ನಿರ್ಧಾರ ಕೈಗೊಂಡರೆ ರಾಜ್ಯಕ್ಕೆ ಅಪಾಯ” ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್ ಅವರು, ಕಾಂಗ್ರೆಸ್ ಹೈಕಮಾಂಡ್‌ಗೆ ನೇರ ಎಚ್ಚರಿಕೆ ನೀಡುತ್ತಾ, “ಸಿಎಂ ಬದಲಾವಣೆ ವಿಚಾರದಲ್ಲಿ ಗೌರವಯುತವಾಗಿ ನಡೆದುಕೊಳ್ಳಬೇಕು. ಅಧಿಕಾರಿಗಳನ್ನು ವರ್ಗಾವಣೆ ಮಾಡಿದಂತೆ ಸಿಎಂ ಬದಲಾವಣೆ ಅಲ್ಲ” ಎಂದು ಹೇಳಿದರು. ಅವರ ಅಭಿಪ್ರಾಯದಲ್ಲಿ, ಸಿದ್ದರಾಮಯ್ಯ ಅವರಂಥ ನಾಯಕರು ಮೂರು ಪಕ್ಷಗಳಲ್ಲೂ ಇಲ್ಲ. ಆದ್ದರಿಂದ ಅವರನ್ನು ಕೆಳಗಡೆ ಇಳಿಸುವುದು ಜನರ ಹಿತಕ್ಕೆ ವಿರುದ್ಧವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಜನರ ಪ್ರತಿಕ್ರಿಯೆ ಬಗ್ಗೆ ಮಾತನಾಡಿದ ಅವರು “ರಾಜ್ಯದ ಜನ ಧಂಗೆ ಏಳುತ್ತಾರೆ” ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದು, ಸಿಎಂ ಬದಲಾವಣೆ ಮಾಡಿದರೆ ಜನರ ಅಸಮಾಧಾನ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಿದರು. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ರಾಜ್ಯದ ಆಡಳಿತ ಸುಗಮವಾಗಿ ನಡೆಯುತ್ತಿದೆ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ವಾಟಾಳ್ ನಾಗರಾಜ್ ಅವರು ತಮ್ಮ ಹೇಳಿಕೆಯಲ್ಲಿ, “ನನ್ನ ಪ್ರಕಾರ ಸಿಎಂ ಆರೋಗ್ಯವಾಗಿರುವ ತನಕ ಕೆಳಗಡೆ ಇಳಿಸಬಾರದು” ಎಂದು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯ ಅವರ ಆರೋಗ್ಯ ಮತ್ತು ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ಮುಂದುವರಿಸಲು ಕಾಂಗ್ರೆಸ್ ಹೈಕಮಾಂಡ್ ಕ್ರಮ ಕೈಗೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಇದೆ ವಿಷಯವಾಗಿ ಈಗ ರಾಜ್ಯದಲ್ಲಿಯ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆ ಆಗುತ್ತಿದ್ದು , ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಮುಂದೆ ಸಿಎಂ ಬದಲಾವಣೆ ಕುರಿತು ತೀವ್ರ ಚಿಂತನೆ ಮೂಡಿಸಿದೆ. ವಾಟಾಳ್ ನಾಗರಾಜ್ ಅವರ ಎಚ್ಚರಿಕೆ, ರಾಜ್ಯದ ಜನರ ಭಾವನೆಗಳನ್ನು ಪ್ರತಿಬಿಂಬಿಸುವಂತಿದೆ. ಮುಂದೇನಾಗುತ್ತದೆ ಎಂದು ಕಾದು ನೋಡೋಣ. ವಾಟಾಳ್ ನಾಗರಾಜ್ ಅವರ ಈ ಹೇಳಿಕೆಗಳ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ, ಧನ್ಯವಾದಗಳು.